ಮಹಿಳಾ ನೌಕರರ ಸಮಾವೇಶದ ಬಗ್ಗೆ ಕೇಳಿದಾಗ, “ಮಹಿಳೆಯರಿಗೆ ಉತ್ತೇಜನ ನೀಡಲು ನಮ್ಮ ಸರ್ಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ನಾನು ನೀರಾವರಿ ಸಚಿವನಾಗಿ ಅಧಿಕಾರ ಸ್ವೀಕಾರ ಮಾಡಿದಾಗ, ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆಗೆ ಹೋಗಿದ್ದೆ. ಆಗ ಅಲ್ಲಿ ಒಬ್ಬ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದರೂ ಯೋಜನೆಗೆ ಅಡ್ಡಿಪಡಿಸುತ್ತಿದ್ದ. ಆಗ ಅಲ್ಲಿದ್ದ ಮೂವರು ಮಹಿಳಾ ಐಎಎಸ್ ಅಧಿಕಾರಿಗಳಿಗೆ ನಾನು ಕೆಲವು ಮಾರ್ಗದರ್ಶನ ನೀಡಿದೆ. ಅವರು ಕೇವಲ ಒಂದೇ ತಿಂಗಳಲ್ಲಿ ಈ ಸಮಸ್ಯೆ ಬಗೆಹರಿಸಿದರು. ಹೀಗೆ ಮಹಿಳೆಯರು ಎಲ್ಲಾ ವಿಚಾರದಲ್ಲೂ ಸಮರ್ಥರಿದ್ದಾರೆ. ಅವರು ಪುರುಷರಿಗಿಂತ ಹೆಚ್ಚು ಶಿಸ್ತುಬದ್ಧವಾಗಿ ಕೆಲಸ ಮಾಡುತ್ತಾರೆ. ಹೀಗಾಗಿ ನಾವು ಅವರಿಗೆ ಪ್ರೋತ್ಸಾಹ ನೀಡುತ್ತಿದ್ದೇವೆ. ಇಂದು ಮಹಿಳಾ ನೌಕರರ ಸಂಘದವರ ಕಾರ್ಯಕ್ರಮಕ್ಕೆ ಬೆಂಬಲ ನೀಡಿದ್ದೇವೆ. ಎಲ್ಲರೂ ಸಮಾನರು, ಪುರುಷ ಹಾಗೂ ಮಹಿಳೆಯರು ಎಂದು ತಾರತಮ್ಯ ಮಾಡಬಾರದು” ಎಂದು ತಿಳಿಸಿದರು.

Share.
Leave A Reply