‘ಪುಷ್ಪ 2’ ವಿಶೇಷ ಪ್ರದರ್ಶನದ ಸಂದರ್ಭದಲ್ಲಿ ದೊಡ್ಡ ಅವಾಂತರ ನಡೆದಿತ್ತು. ಆ ವೇಳೆ ಓರ್ವ ಮಹಿಳೆ ಸಾವನ್ನಪ್ಪಿದ್ದರೆ, ಅವರ ಮಗ ಗಂಭೀರವಾಗಿ ಗಾಯಗೊಂಡಿದ್ದ. ಈಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಗೆ ಸಂಕಷ್ಟ ಶುರುವಾಗಿದೆ.
ವರ್ಷದ ಹಿಂದೆ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ (Allu Arjun) ಅವರನ್ನು ಎ11 ಆರೋಪಿ ಆಗಿ ಹೆಸರಿಸಲಾಗಿದೆ.
ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ‘ಪುಷ್ಪ 2’ ಸಿನಿಮಾ ವೀಕ್ಷಿಸಲು ಆಗಮಿಸಿದ್ದರು. ಆ ವೇಳೆ ಜನಜಂಗುಳಿಯೇ ಇತ್ತು. ಹೀಗಾಗಿ ಕಾಲ್ತುಳಿತ ಉಂಟಾಗಿತ್ತು. ಅಲ್ಲು ಅರ್ಜುನ್ ಬಂದಿದ್ದರಿಂದಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರೆಂದು ಪೊಲೀಸರು ಹೇಳಿದ್ದರು. ಅಲ್ಲದೇ, ಅಲ್ಲು ಕೂಡ ಅರೆಸ್ಟ್ ಆಗಿದ್ದರು. ಈಗ ಇದೇ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಚಿಕ್ಕಡಪಲ್ಲಿ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ಚಾರ್ಜ್ಶೀಟ್ನಲ್ಲಿ ಸಲ್ಲಿಕೆ ಮಾಡಿದ್ದಾರೆ. ಸಂಧ್ಯಾ ಥಿಯೇಟರ್ ಮ್ಯಾನೇಜ್ಮೆಂಟ್ ನ್ನು ಎ1 ಆಗಿ ಪರಿಗಣಿಸಲಾಗಿದೆ. ಘಟನೆಗೆ ಕಾರಣವಾದ ಲೋಪಗಳಿಗೆ ಥಿಯೇಟರ್ ನವರು ಕೂಡ ಮುಖ್ಯ ಹೊಣೆ ಎಂದಿದ್ದಾರೆ.
ಜನಸಂದಣಿಯ ನಿರ್ವಹಣೆ ಸರಿಯಾಗಿಲ್ಲದ ಕಾರಣ, ಸರಿಯಾದ ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ ಪರಿಸ್ಥಿತಿ ನಿಯಂತ್ರಣ ತಪ್ಪಿತು. ಪ್ರಕರಣಕ್ಕೆ ಸಂಬಂದಿಸಿದಂತೆ ಸಂಪೂರ್ಣವಾದ ಸಾಕ್ಷಿಗಳು ಸಿಕ್ಕಿವೆ. ಹೀಗಾಗಿ, ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಅಲ್ಲು ಅರ್ಜುನ್ ಗೆ ಸಂಕಷ್ಟ ಶುರುವಾಗಿದೆ.

