ಸಹನಟಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಜೈಲುಪಾಲಾಗಿ ಬಿಡುಗಡೆಗೊಂಡಿದ್ದ ಮಡೆನೂರು ಮನು ಜೊತೆ ಇದೀಗ ಸಂತ್ರಸ್ತೆ ಕಾಂಪ್ರಮೈಸ್ ಮಾಡಿಕೊಂಡಿದ್ದಾರೆ. ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಕೇಸ್ ಹಾಕಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟಿ ಇದೀಗ ಕೇಸನ್ನು ಹಿಂಪಡೆದಿದ್ದಾರೆ.

ಮಡೆನೂರು ಮನು ವಿರುದ್ಧ ಸಂತ್ರಸ್ತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನವೆಂಬರ್ 2022ರಿಂದ ಮೇ 2025ರವರೆಗೆ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ. ಮದುವೆ ಹೆಸರಿನಲ್ಲಿ ಅತ್ಯಾಚಾರ ಎಸಗಿ ದೈಹಿಕ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಮಡೆನೂರು ಮನುವನ್ನು ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಬಳಿಕ ನ್ಯಾಯಾಲಯ ಮಡೆನೂರು ಮನುವನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ದಿಢೀರ್ ಉಲ್ಟಾ ಹೊಡೆದಿದ್ಯಾಕೆ ಸಂತ್ರಸ್ತೆ?

ಕೆಲ ತಿಂಗಳುಗಳ ಹಿಂದೆ ಆ ಸಂತ್ರಸ್ಥೆಯು ಮಾಧ್ಯಮದ ಮುಂದೆ ಬಂದು, “ಮನು ನನ್ನ ಮದುವೆ ಆಗ್ತಿನಿ ಅಂತ ಹೇಳಿದ್ದನು. ಕುಡಿದು ಬಂದು ನನ್ನ ಮೇಲೆ ಅತ್ಯಾಚಾರ ಮಾಡಿದ್ದನು. ಅಷ್ಟೇ ಅಲ್ಲದೆ ಸಿಕ್ಕಾಪಟ್ಟೆ ನಿಂದಿಸಿದ್ದಾನೆ, ನನಗೆ ಕುಡಿಸಿ ಬಲವಂತದಿಂದ ಅತ್ಯಾಚಾರ ಮಾಡಿದ್ದಾನೆ ಎಂದು ಹೇಳಿದ್ದರು. ಅದಾದ ಬಳಿಕ ನಟ ಶಿವರಾಜ್‌ಕುಮಾ‌ರ್, ಧ್ರುವ ಸರ್ಜಾ, ದರ್ಶನ್ ಬಗ್ಗೆ ಮನು ಹೇಳಿರುವ ಆಡಿಯೋವನ್ನು ರಿಲೀಸ್ ಮಾಡಲಾಗಿತ್ತು. ಇದನ್ನು ನೋಡಿ ಈ ನಟರ ಫ್ಯಾನ್ಸ್ ಆಕ್ರೋಶಗೊಂಡಿದ್ದರು.

ಅಷ್ಟೇ ಅಲ್ಲದೆ ಮನು ಅವರನ್ನು ಕಿರುತೆರೆ, ಹಿರಿತೆರೆಯಿಂದ ಬ್ಯಾನ್ ಮಾಡಬೇಕು ಎಂದು ಕೂಡ ಒತ್ತಾಯಿಸಲಾಗಿತ್ತು. ಇನ್ನು ಮನು ನಟನೆಯ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ರಿಲೀಸ್‌ಗೆ ಒಂದು ದಿನ ಮುಂಚೆ ಅವರು ಜೈಲು ಸೇರಿದ್ದರು. ಈ ಮೂಲಕ ಅವರ ವರ್ಷಗಳ ಕನಸು ಕಮರಿತ್ತು. ಕೆಲ ದಿನಗಳ ಕಾಲ ಜೈಲಿನಲ್ಲಿದ್ದು, ಆ ಬಳಿಕ ಹೊರಬಂದರು.

ಪರಪ್ಪನ ಅಗ್ರಹಾರದಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ, ಅತ್ಯಾಚಾರ ಕೇಸ್‌ನಲ್ಲಿ ಕಾನೂನು ಹೋರಾಟ ಮಾಡುತ್ತೇನೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಮನು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

Share.
Leave A Reply