ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈಗಾಗಲೇ ಬಂಗ್ಲೆಗುಡ್ಡೆಯಲ್ಲಿ (Banglegudde) ಸಿಕ್ಕಿರುವ 7 ಅಸ್ಥಿ ಪಂಜರಗಳನ್ನು ವಿಶೇಷ ತನಿಖಾ ತಂಡ (SIT) ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದೆ.

ಧರ್ಮಸ್ಥಳದ (Dharmasthala) ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ವರ್ಷಗಳಿಂದ ದಾಖಲಾಗಿರುವ 74 ಮಹಿಳೆಯರ ನಾಪತ್ತೆ ಪ್ರಕರಣಗಳು ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಹೊಸ ಅರ್ಜಿಯೊಂದು ಸಲ್ಲಿಕೆಯಾಗಿದ್ದು, ಧರ್ಮಸ್ಥಳದಲ್ಲಿ ಅತ್ಯಾಚಾರವಾಗಿ ಕೊಲೆಯಾದ ಸೌಜನ್ಯ (Sowjanya) ತಾಯಿ ಕುಸುಮವತಿ ಗೌಡ (Kusumavathi) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ (Supreme Court) ಮಾರ್ಚ್ 23ಕ್ಕೆ ಮುಂದೂಡಿಕೆ ಮಾಡಿದೆ.

ಇದರ ಮಧ್ಯೆಯೂ ಈಗ ಬುರುಡೆ ರಹಸ್ಯದ (Dharmasthala Case) ತನಿಖೆಯನ್ನು ಈಗಾಗಲೇ ಎಸ್ ಐಟಿ ಚುರುಕುಗೊಳಿಸಿದ್ದು, ಬಂಗ್ಲೆಗುಡ್ಡೆ ಅರಣ್ಯದಲ್ಲಿ ಉತ್ಖನನ ಕೈಗೊಂಡಿತ್ತು. ಸೆ.17 ರಂದು 5 ಅಸ್ಥಿಪಂಜರ, ಸೆ.18 ರಂದು 2 ಅಸ್ಥಿಪಂಜರ ಪತ್ತೆಯಾಗಿತ್ತು. ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿದ್ದ ಅಸ್ಥಿಪಂಜರಗಳು ಸಿಕ್ಕಿದ್ದವು. ಈ ಅಸ್ತಿಗಳನ್ನ ಬೆಂಗಳೂರು ಎಫ್‌ಎಸ್‌ಎಲ್‌ ಕೇಂದ್ರಕ್ಕೆ ಈಗ ಕಳುಹಿಸಲಾಗಿದೆ.

ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸಿದ್ದ ಎಸ್‌ಐಟಿಯು ನ.20 ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತನಿಖಾ ಪ್ರಾಥಮಿಕ ವರದಿ ಸಲ್ಲಿಕೆ ಮಾಡಿತ್ತು. ಆಗ ಶೀಘ್ರವೇ ತನಿಖೆ ನಡೆಸಿ ಪೂರ್ಣ ವರದಿ ಸಲ್ಲಿಸುವಂತೆ ಕೋರ್ಟ್‌ ಸೂಚನೆ ನೀಡಿತ್ತು.

Share.
Leave A Reply