ಇಸ್ರೇಲ್, ಇರಾನ್ ಮಧ್ಯೆ (Israel-Iran conflict) ನಡೀತಿರೋ ಯುದ್ಧಕ್ಕೆ ಈಗ ದೊಡ್ಡಣ್ಣ ಎಂಟ್ರಿ ಕೊಟ್ಟಿದ್ದಾರೆ. ಇಸ್ರೇಲ್‌ಗೆ ಬೆಂಬಲಿಸಿ ರಾತ್ರೋ ರಾತ್ರಿ ಇರಾನ್‌ನ ಮೂರು ಪರಮಾಣು ತಾಣಗಳಾದ ಫೋರ್ಡೋ, ನಟಾಂಜ್, ಎಸ್ಪಹಾನ್ ಮೇಲೆ ಅಮೆರಿಕ ದಾಳಿ ಮಾಡಿದೆ. ಈ ಬಗ್ಗೆ ಸತ್ವಃ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ, ಪೋಸ್ಟ್ ಶೇರ್ ಮಾಡೋ ಮೂಲಕ ಮಾಹಿತಿ ನೀಡಿದ್ದಾರೆ.
ಇರಾನ್‌ನ 3 ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಪಹಾನ್ ಮೇಲೆ ದಾಳಿ (US airstrikes on Iran) ಯಶಸ್ವಿಯಾಗಿದೆ. ಎಲ್ಲಾ ಯುದ್ಧ ವಿಮಾನಗಳು ಸುರಕ್ಷಿತವಾಗಿ ತಮ್ಮ ನೆಲೆಗೆ ಮರಳುತ್ತಿವೆ. ಈಗ ಯುದ್ಧ ವಿಮಾನಗಳು ಇರಾನಿನ ವಾಯುಪ್ರದೇಶ ತೊರೆಯುತ್ತಿವೆ. ಈಗ ಶಾಂತಿಯ ಸಮಯ ಎಂದು ಟ್ರಂಪ್ ಟ್ವೀಟ್‌ನಲ್ಲಿ ಹೇಳಿದ್ದಾರೆ.
— Donald J. Trump (@realDonaldTrump) June 21, 2025
ಇದೀಗ ಅಮೆರಿಕ ಇರಾನ್ ಮೇಲೆ ರಾತ್ರೋರಾತ್ರಿ ದಾಳಿ ಮಾಡುವ ಮೂಲಕ ಮೂರು ಪರಮಾಣು ಕೇಂದ್ರಗಳನ್ನು ಉಡೀಸ್ ಮಾಡಿದೆ. ತಮ್ಮ ಅಮೆರಿಕ ಸೇನೆಗೆ ಟ್ರಂಪ್ ಅಭಿನಂದನೆ ಸಲ್ಲಿಸಿದ್ದಾರೆ.
ಇನ್ನು ಪರಮಾಣು ಕೇಂದ್ರ ಫೋರ್ಡೋ ಮೇಲಿನ ದಾಳಿಯನ್ನು ಇರಾನ್‌ನ ಸ್ಥಳೀಯ ಆಡಳಿತ ಕೋಮ್ ದೃಢಪಡಿಸಿದೆ. ಫೋರ್ಡೋ ಮೇಲೆ ಆರು ಅಮೆರಿಕನ್ ಬಾಂಬರ್‌ಗಳು ದಾಳಿ ಮಾಡಿವೆ. ನಟಾಂಜ್ ಮತ್ತು ಎಸ್ಪಹಾನ್ ಮೇಲೆ ಅಮೆರಿಕನ್ ಜಲಾಂತರ್ಗಾಮಿ ನೌಕೆಗಳು 30 ಟೊಮಾಹಾಕ್ ಕ್ಷಿಪಣಿಗಳೊಂದಿಗೆ ದಾಳಿ ಮಾಡಿದ್ದು, ಇರಾನ್‌ನಿಂದ 400 ಮೈಲುಗಳಷ್ಟು ದೂರದಲ್ಲಿ ದಾಳಿ ನಡೆದಿದೆ.

