Site icon BosstvKannada

B Saroja Devi Passes Away : ಬದುಕಿನ ಪಯಣ ಮುಗಿಸಿದ ಹಿರಿಯ ನಟಿ ಸರೋಜಾದೇವಿ!

ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ಅಭಿನಯ ಸರಸ್ವತಿ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು.

ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇನ್ನು ಸರೋಜಾದೇವಿ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ನಟಿ ಚಿತ್ರರಂಗದಲ್ಲಿ ಮಿಂಚಿ ಮರೆಯಾಗಿದ್ದಾರೆ.

Exit mobile version