Site icon BosstvKannada

ಇಂದು ಉಪರಾಷ್ಟ್ರಪತಿ ಚುನಾವಣೆ : ಪ್ರಧಾನಿ ಮೋದಿಯಿಂದ ಮತದಾನ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಆಡಳಿತ-ವಿರೋಧ ಪಕ್ಷದ ನಡುವೆ ಪ್ರತಿಷ್ಠೆಯ ಕಣವಾಗಿದ್ದು, NDA ಅಭ್ಯರ್ಥಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್, ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ.

ಬೆಳಗ್ಗೆ 9 ಗಂಟೆಯಿಂದ ಆರಂಭವಾದ ಚುನಾವಣೆ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಿದ್ದಾರೆ. ಸಂಜೆ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ. ಬಹುತೇಕ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರ ಗೆಲುವು ಸ್ಪಷ್ಟವಾಗಿದೆ ಅಂತಾ ಹೇಳಲಾಗ್ತಿದೆ.

Read Also : ಪ್ರಧಾನಿ ಮೋದಿಯನ್ನ ʼಬೆಸ್ಟ್‌ ಫ್ರೆಂಡ್‌ʼ ಎಂದು ಬಣ್ಣಸಿದ ಡೊನಾಲ್ಡ್‌ ಟ್ರಂಪ್‌!

Exit mobile version