ಕಿಚ್ಚ ಸುದೀಪ್ ಯುದ್ಧ ಸಾರಿದ ನಂತರ ಸ್ಟಾರ್ ವಾರ್ ನಡೆಯುತ್ತಿದ್ದು, ಇಂದು ಪರಪ್ಪನ ಅಗ್ರಹಾರಕ್ಕೆ ತೆರಳಿದ್ದ ವಿಜಯಲಕ್ಷ್ಮೀ(Vijayalakshmi Darshan) ದರ್ಶನ್ ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ವಿಜಯಲಕ್ಷ್ಮೀ ಪರಪ್ಪನ ಅಗ್ರಹಾರಕ್ಕೆ ಹೋದ ವೇಳೆ ಸಹೋದರ ದಿನಕರ್ ತೂಗುದೀಪ ಕೂಡ ಜೊತೆಗಿದ್ದರು. ಜೈಲಿಗೆ ಭೇಟಿ ನೀಡಿದ ನಂತರ ಪೋಸ್ಟ್ ಮಾಡಿದ್ದಾರೆ. ಈ ವೇಳೆ ಅರ್ಧಗಂಟೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ದರ್ಶನ್ ಅವರು, ‘ಯಾವುದಕ್ಕೂ ಹೆಚ್ಚು ತಲೆ ಕೆಸಿಕೊಳ್ಳಬೇಡಿ. ನಮಗೂ ಒಳ್ಳೆಯ ಸಮಯ ಬರುತ್ತದೆ. ಅಲ್ಲಿಯವರೆಗೆ ಕಾಯಬೇಕು’ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ. ‘ದಿ ಡೆವಿಲ್’ ಸಿನಿಮಾದ ಬಗ್ಗೆ ದರ್ಶನ್ ಅವರು ಅಪ್ಡೇಟ್ ಕೇಳಿದ್ದಾರೆ. ಸಿನಿಮಾ ಕಲೆಕ್ಷನ್ ಸೇರಿದಂತೆ ಫ್ಯಾನ್ಸ್ ಸಪೋರ್ಟ್ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ತೂಗುದೀಪ ತಿಳಿಸಿದ್ದಾರೆ ಎನ್ನಲಾಗಿದೆ.
