ನೇಪಾಳದಲ್ಲಿ ಭುಗಿಲೆದ್ದಿರುವ ಸಂಘರ್ಷ ತಾರಕಕ್ಕೇರಿರುವಂತೆಯೇ ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಮಂಗಳವಾರ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಕೆ.ಪಿ. ಓಲಿ ಮಧ್ಯಾಹ್ನ ರಾಜೀನಾಮೆ ನೀಡಿದ ನಂತರ ಪೌಡೆಲ್ ಅವರು ರಾಜೀನಾಮೆ ನೀಡಿದ್ದಾರೆ. ಪ್ರತಿಭಟನಾಕಾರರು ಸಂಸತ್ ಭವನ, ಓಲಿ ಅವರ ಖಾಸಗಿ ನಿವಾಸ ಮತ್ತು ಇತರ ಕಾಂಗ್ರೆಸ್ ನಾಯಕರ ಮನೆಗಳಿಗೆ ನುಗ್ಗಿ ಬೆಂಕಿ ಹಚ್ಚಿದರು.

ಗೃಹ ಸಚಿವರು ಸೇರಿದಂತೆ ಇಬ್ಬರು ಸಚಿವರು ರಾಜೀನಾಮೆ ನೀಡಿದ್ದಾರೆ.. ಇಷ್ಟಾದ್ರೂ ಪರಿಸ್ಥಿತಿ ಮಾತ್ರ ಶಾಂತವಾಗಿಲ್ಲ.. ಪ್ರತಿಭಟನೆಯ ಕಾವು ಮತ್ತಷ್ಟು ಜೋರಾಗಿದೆ.. ಹೀಗಾಗಿ ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ ನೇಪಾಳದ ಪ್ರಧಾನಿಯೇ ಪಲಾಯನ ಮಾಡಲು ಸಜ್ಜಾಗಿದ್ದಾರೆ ಅಂತ ಹೇಳಲಾಗ್ತಿದೆ.. ಕೆ.ಪಿ.ಶರ್ಮಾ ಓಲಿ ಪ್ರತಿಭಟನೆಗೆ ಹೆದರಿ ದುಬೈಗೆ ಹಾರಲಿದ್ದಾರೆ ಅಂತ ಹೇಳಲಾಗ್ತಿದೆ.. ಅಂದಹಾಗೆ ಈ ಹಿಂಸಾಚಾರದಲ್ಲಿ 19 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ನೇಪಾಳ ಪರಿಸ್ಥಿತಿ ಇನ್ನೂ ಹದಗೆಡುವ ಸಾಧ್ಯತೆ ಇದೆ ಅಂತಾ ಹೇಳಲಾಗ್ತಿದೆ.

Share.
Leave A Reply