ಈಗಾಗಲೇ ಪಾಕ್‌ಗೆ ನುಗ್ಗಿ ಭಾರತೀಯ ಸೇನೆ ಭಯಾನಕ ದಾಳಿ ಮಾಡಿದ್ದು, ಪಾಕಿಸ್ತಾನ ತತ್ತರಿಸಿದೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಬಿರುಸಿನ ದಾಳಿ ನಡೆದಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಭೀತಿಯಿಂದಾಗಿ ಐಪಿಎಲ್ (IPL) ಟೂರ್ನಿಯನ್ನು ಬಿಸಿಸಿಐ(BCCI) ಸ್ಥಗಿತಗೊಳಿಸಿದೆ. ಇದಕ್ಕೆ ವಿರಾಟ್ ಕೊಹ್ಲಿ (Virat Kohli) ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಸೈನ್ಯದ ಪರ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.. ತಮ್ಮ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನಾವು ಒಗ್ಗಟ್ಟಾಗಿರುತ್ತೇವೆ. ಭಾರತೀಯ ಸೇನೆಗೆ ಸೆಲ್ಯೂಟ್ ಎಂದಿದ್ದಾರೆ.
ಈ ಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ರಕ್ಷಿಸುತ್ತಿರುವುದಕ್ಕಾಗಿ ಭಾರತೀಯ ಸೇನೆಗೆ ನನ್ನ ಸೆಲ್ಯೂಟ್. ನಾವು ನಮ್ಮ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದ ಇರುತ್ತೇವೆ. ನಮ್ಮ ಯೋಧರ ಹಾಗೂ ಅವರ ಕುಟುಂಬದವರು ನಮ್ಮ ದೇಶಕ್ಕಾಗಿ ಮಾಡುವ ತ್ಯಾಗಗಳಿಗೆ ನಾವು ಸದಾ ಕೃತಜ್ಞರಾಗಿರುತ್ತೇವೆ ಎಂದು ವಿರಾಟ್ ಕೊಹ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಇನ್ನು ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ಸಖತ್ ಮಿಂಚ್ತಾಯಿದ್ದು, ಆರ್‌ಸಿಬಿ ಪಾಯಿಂಟ್ ಟೇಬಲ್ನಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯ ಐಪಿಎಲ್ ಪಂದ್ಯವೇ ಸ್ಥಗಿತವಾಗಿರುವುದು ಅಭಿಮಾನಿಗಳ ಕನಸಿಗೆ ತಣ್ಣೀರು ಎರಚಿದಂತೆ ಆಗಿದೆ. ಆದ್ರೆ ಕೊಹ್ಲಿ ಇದರ ಬಗ್ಗೆ ತಲೆಕೆಡಿಸಿಕೊಳ್ಳದೇ, ಪೋಸ್ಟ್ ಶೇರ್ ಮಾಡಿಕೊಳ್ಳೋ ಮೂಲಕ ದೇಶ ಹಾಗೂ ಸೇನೆಯ ಪರ ಎಂಬ ಸಂದೇಶವನ್ನ ಅಭಿಮಾನಿಗಳಿಗೆ ರವಾನಿಸಿದ್ದಾರೆ.
Also Read: Operation Sindoor : ವಿದೇಶಾಂಗ ಸಚಿವರಿಗೆ ಸರಿಸಾಟಿ ಯಾರಿಲ್ಲ..!
ಇನ್ನು, ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನ ಸ್ಥಿತಿಯ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ತಕ್ಷಣಕ್ಕೆ ರದ್ದುಗೊಳಿಸಿ ಆದೇಶ ಹೊರಡಿಸಿತು. ಹೀಗಾಗಿ ಗುರುವಾರ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂದ್ಯವನ್ನು ರದ್ದುಗೊಳಿಸಲಾಯಿತು. ಗಡಿಗೆ ಹತ್ತಿರದಲ್ಲಿರುವ ಕಾರಣ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಿಂದ ಆಟಗಾರರು ಮತ್ತು ಪ್ರೇಕ್ಷಕರನ್ನು ಸ್ಥಳಾಂತರಿಸಲಾಯಿತು.

