Virat Kohli Retires From Test Cricket: ಭಾರತೀಯ ಟೆಸ್ಟ್‌ ಕ್ರಿಕೆಟ್‌ನಲ್ಲಿ ರನ್‌ ಶಿಖರ್‌ ನಿರ್ಮಿಸಿದ್ದ ಮತ್ತೊಂದು ಬ್ಯಾಟ್‌ ನಿವೃತ್ತಿ ಘೋಷಿಸಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ದಿಢೀರ್‌ನೆ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ರೋಹಿತ್ ಶರ್ಮಾ ಕೂಡಾ ಟೆಸ್ಟ್ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದರು. ಇದೀಗ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಘೋಷಿಸುವ ಮುನ್ನವೇ ಅಚ್ಚರಿಯ ರೀತಿಯಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ.

ರೋಹಿತ್ ಶರ್ಮಾ ಬಳಿಕ ರನ್ ಮಷಿನ್ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದು, ಕೊಹ್ಲಿ ಫ್ಯಾನ್ಸ್‌ಗೆ ಶಾಕ್‌ ಎದುರಾಗಿದೆ. ಈಗಾಗಲೇ T20 ಕ್ರಿಕೆಟ್​ಗೆ ಕೊಹ್ಲಿ ಗುಡ್‌ ಬೈ ಹೇಳಿದ್ದು, ಸದ್ಯ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಮಾತ್ರ ಆಡಲಿದ್ದಾರೆ. 2025 ಐಪಿಎಲ್ ಮುಗಿದ ಬಳಿಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಭಾರತ ತಂಡ ರೆಡಿಯಾಗುತ್ತಿದೆ. ಇಂಗ್ಲೆಂಡ್‌ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ಘೋಷಿಸದಂತೆ ಹಲವು ಕ್ರಿಕೆಟ್ ದಿಗ್ಗಜರು ಮನವಿ ಮಾಡಿದ್ದರು.

Also Read: IPL 2025 ಪುನರಾರಂಭಕ್ಕೂ ಮುನ್ನವೇ ಆರ್‌ಸಿಬಿಗೆ ಶಾಕ್!

ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಬಯಸಿದ್ದ ಕೊಹ್ಲಿ ತಮ್ಮ ನಿರ್ಧಾರಕ್ಕೆ ಬದ್ಧರಾಗಿ ಇಂದು ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ ಮಾಡಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ತಂದಿದೆ.. ಇನ್ನು, ಕೊಹ್ಲಿ 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಟೀಮ್ ಇಂಡಿಯಾ ಪರ 123 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೊಹ್ಲಿ, 210 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದು, ಒಟ್ಟು 9230 ರನ್ ಕಲೆಹಾಕಿದ್ದಾರೆ. 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿ ದಾಖಲೆ ಬರೆದಿದ್ದಾರೆ.

ಇನ್ನು ವಿರಾಟ್‌ ಕೊಹ್ಲಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಸುದೀರ್ಘ ಪೋಸ್ಟ್‌ ಹಂಚಿಕೊಂಡು, ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿಯನ್ನ ವಿದಾಯ ಹೇಳಿದ್ದಾರೆ.

Share.
Leave A Reply