ಈ ವರ್ಷದ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಸರ್ಕಾರದ ಈ ನಿರ್ಧಾರ ಸಾಕಷ್ಟು ವಿವಾದ ಹುಟ್ಟುಹಾಕಿದೆ. ಈ ಬಗ್ಗೆ ಯದುವೀರ್ ಒಡೆಯರ್ ಪ್ರತಿಕ್ರಿಯಿಸಿದ್ದು, ಬೂಕರ್ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸರ್ಕಾರದ ಈ ಆಯ್ಕೆಯನ್ನ ಸ್ವಾಗತಿಸುತ್ತೇನೆ ಎಂದು ಸಂಸದರು ತಿಳಿಸಿದ್ದಾರೆ.
ಕೊಡಗಿನ ವಿರಾಜಪೇಟೆಯಲ್ಲಿ ಮಾತಾನಾಡಿದ ಅವರು, ಬಾನು ಮುಷ್ತಾಕ್ ಅವರು ಖ್ಯಾತ ಬರಹಗಾರ್ತಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜೊತೆಗೆ ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಸಮಾನವಾದ ಹಕ್ಕು ಕೋಡಬೇಕು. ಮಸೀದಿಗಳಿಗೆ ಅವಕಾಶ ಕೋಡಬೇಕು ಎಂದು ಬಾನು ಮುಷ್ತಾಕ್ ಅವರು ಈ ಹಿಂದೆ ಸಾಮಾಜಿಕ ಬಹಿಷ್ಕಾರವನ್ನು ಕೂಡ ಎದುರಿಸಿದ್ದರು ಎಂದಿದ್ದಾರೆ.
ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನ ಆಯ್ಕೆ ಮಾಡಿದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಮಾತನಾಡಿರುವ ಸಂಸದ ಯದುವೀರ್, ಬಾನು ಮುಸ್ತಾಕ್ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಅವರ ಆಯ್ಕೆಯಲ್ಲಿ ನನಗೆ ಯಾವುದೇ ಅಭಿಪ್ರಾಯ ಇಲ್ಲ. ಆದರೆ ತಾಯಿ ಚಾಮುಂಡೇಶ್ವರಿ ಗೌರವ ಕೊಟ್ಟರೆ ನಮ್ಮದೇನು ತಕರಾರು ಇಲ್ಲ ಎಂದಿದ್ದಾರೆ.
ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಶ್ರೀಮತಿ ಮುಷ್ತಾಕ್ ಅವರ ಸಾಧನೆಗಳನ್ನು ಗೌರವಿಸಬೇಕು ಎಂದು ಹೇಳಿದರು, ಆದರೆ ಮೈಸೂರಿನಲ್ಲಿ ದಸರಾ ಹಬ್ಬವನ್ನು ಉದ್ಘಾಟಿಸಲು ಅವರನ್ನು ಕರೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿದರು. ನೀವು ಮುಸ್ಲಿಂ ಎಂಬ ಕಾರಣಕ್ಕಾಗಿ ನಾನು ಖಂಡಿತವಾಗಿಯೂ ಈ ಆಕ್ಷೇಪಣೆಯನ್ನು ಎತ್ತುತ್ತಿಲ್ಲ. ನಿಮ್ಮ ಸಾಧನೆಗಳ ಬಗ್ಗೆ ನಮಗೂ ಗೌರವವಿದೆ. ನೀವು ಸಾಹಿತ್ಯಕ್ಕೆ ಕೊಡುಗೆಗಳನ್ನು ನೀಡಿದ್ದೀರಿ. ನೀವು ಬೂಕರ್ ಪ್ರಶಸ್ತಿಯನ್ನೂ ಗೆದ್ದಿದ್ದೀರಿ. ಕರ್ನಾಟಕ ಮತ್ತು ಭಾರತದಲ್ಲಿ ನಾವೆಲ್ಲರೂ ಅದನ್ನು ಗೌರವಿಸುತ್ತೇವೆ, ಪ್ರೀತಿಸುತ್ತೇವೆ ಮತ್ತು ಹೆಮ್ಮೆಪಡುತ್ತೇವೆ. ಆದರೆ ದಸರಾ ಆಚರಣೆ ಜಾತ್ಯತೀತ ಕಾರ್ಯಕ್ರಮವಲ್ಲ. ಇದು ಧಾರ್ಮಿಕ ಆಚರಣೆ. ಬಾನು ಮುಷ್ತಾಕ್ ಅವರ ವೈಯಕ್ತಿಕ ನಂಬಿಕೆಗಳಿಗೆ ನಮಗೆ ಯಾವುದೇ ಆಕ್ಷೇಪಣೆಗಳಿಲ್ಲ. ಆದರೆ ದಸರಾ ನಮ್ಮ ಧರ್ಮದ ಪ್ರತಿಬಿಂಬವಾಗಿದೆ. ಇದು ನಮ್ಮ ಹಬ್ಬ” ಎಂದು ಶ್ರೀ ಪ್ರತಾಪ ಸಿಂಹ ವಿರೋಧ ವ್ಯಕ್ತಪಡಿಸಿದರು.
ಕನ್ನಡ ಭಾಷೆ, ಕನ್ನಡ ಸಾಹಿತ್ಯಕ್ಕಾಗಿ ಅವರು ಕೊಟ್ಟಿರುವ ಕೊಡುಗೆಗಳು ಅಪಾರವಾಗಿದೆ. ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಸ್ವಾಗತ ಮಾಡುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಈ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸರ್ಕಾರಿ ಕಾರ್ಯಕ್ರಮದಲ್ಲಿ ಪೂಜೆ ಮಾಡುವುದು ಇಲ್ಲವೇ ಇಲ್ಲ. ಇದು ಜಾತ್ಯತೀತ ವ್ಯವಸ್ಥೆಯಾಗಿದೆ. ಧಾರ್ಮಿಕ ಪೂಜೆಗಳನ್ನು ನಾವು ವೈಯಕ್ತಿಕವಾಗಿ ಮನೆಯಲ್ಲಿ ಮಾಡಿಕೊಳ್ಳುತ್ತೇವೆ. ಸರ್ಕಾರಕ್ಕೆ ಇದೊಂದು ಉತ್ಸವ. ಅವರ ಆಯ್ಕೆ ಬಗ್ಗೆ ನನ್ನ ವಿರೋಧವಿಲ್ಲ ಎಂದಿದ್ದಾರೆ.

