ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭಾರತ ಪ್ರವಾಸದ ಹಿನ್ನೆಲೆಯಲ್ಲಿ ಇಂದು ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದು, ನನ್ನ ಸ್ನೇಹಿತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಸ್ವಾಗತಿಸಲು ಸಂತೋಷವಾಗುತ್ತಿದೆ ಎಂದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಅಲ್ಲದೇ, ಇಂದು ಸಂಜೆ ಮತ್ತು ನಾಳೆ ನಮ್ಮ ಸಂವಾದಗಳನ್ನು ಎದುರು ನೋಡುತ್ತಿದ್ದೇನೆ. ಭಾರತ-ರಷ್ಯಾ ಸ್ನೇಹವು ಕಾಲಾತೀತವಾಗಿದ್ದು, ಇದು ನಮ್ಮ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿರುವ ರಷ್ಯಾ ಅಧ್ಯಕ್ಷ ಪುಟಿನ್ ಗುರುವಾರ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ. ನಂತರ ಇಬ್ಬರೂ ನಾಯಕರು ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದರು. ಪುಟಿನ್ ಆಗಮಿಸಿರುವ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ. ಈ ಪ್ರವಾಸಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
