ನವದೆಹಲಿ: ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯೆ ಪವರ್ ಶೇರಿಂಗ್ ವಿಚಾರದಲ್ಲಿ ದೊಡ್ಡ ಸಂಘರ್ಷವೇ ನಡೆಯುತ್ತಿತ್ತು. ಆದರೆ, ಈಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಶಸ್ತ್ರಾಸ್ತ್ರ ತ್ಯಾಗ ಮಾಡಿದರೇ ಎಂಬ ಆನುಮಾನ ವ್ಯಕ್ತವಾಗುತ್ತಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಲ್ ಮಟ್ಟದಲ್ಲೇ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಹೇಳುತ್ತಿದ್ದಂತೆ ಡಿಕೆಶಿ ಹಾಗೂ ಆಪ್ತ ಬಳಕ್ಕೆ ನಿರಾಸೆ ಮೂಡಿತ್ತು. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ (CM Siddaramaiah) ಹೈಕಮಾಂಡ್ ಅಂಗಳಕ್ಕೆ ಚೆಂಡು ಎಸೆದು ಬಿಟ್ಟಿದ್ದರು. ಇವುಗಳ ಮಧ್ಯೆ ಡಿಕೆಶಿ ನಾನು ಹೈಕಮಾಂಡ್‌ನವರಿಗೆ ತೊಂದರೆ ಕೊಡಲು ಹೋಗುವುದಿಲ್ಲ ಎಂದಿದ್ದಾರೆದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಈಗಷ್ಟೇ ವಿದೇಶದಿಂದ ಬಂದಿದ್ದಾರೆ.
ನಾನು ರಾಹುಲ್‌ಗಾಂಧಿ (Rahul Gandhi) ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ. ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡಿಲ್ಲ. ನಾನು ಪಕ್ಷದ ಕಾರ್ಯಕರ್ತನ್ನಾಗಿ ಇರಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.ಸಿಎಂ ಬದಲಾವಣೆ ಬಗ್ಗೆ ಯಾವುದೇ ಊಹಾಪೋಹಗಳಿಲ್ಲ. ಬ್ರೇಕ್ ಫಾಸ್ಟ್ ಮೀಟಿಂಗ್ ಬಹಳ ಸಾಮಾನ್ಯ ಪ್ರಕ್ರಿಯೆಯಾಗಿದ್ದು ಎಲ್ಲರ ಜೊತೆಗೂ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತೇವೆ. ಶೇರಿಂಗ್ ಕೇರಿಂಗ್ ಬಹಳ ಸಾಮಾನ್ಯ ಎಂದಿರುವ ಅವರು, ಅಹಿಂದ ಸಮಾವೇಶಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.

