ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದೆ ಎಂಬ ಅಂಶ ಬೆಳಕಿಗೆ ಬಂದಿತ್ತು. ಸದ್ಯ ಈ ವದಂತಿಗೆ ವಿಧಾನಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಸ್ಪಷ್ಟನೆ ನೀಡಿದ್ದಾರೆ.
ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಈ ಕುರಿತು ಉತ್ತರ ನೀಡಿದ್ದಾರೆ. ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿಲ್ಲ. ಅದು ತಿನ್ನಲು ಸುರಕ್ಷಿತವಾಗಿದೆ. ಮೊಟ್ಟೆ ಬಗ್ಗೆ ಹಬ್ಬಿರುವುದು ವದಂತಿಯಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.
ಹಿಂದಿನ ವರ್ಷ 147 ಮೊಟ್ಟೆ ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಈ ಪೈಕಿ ಒಂದು ಫೇಲ್ ಆಗಿದ್ದು, ಉಳಿದವು ಉತ್ತಮವಾಗಿವೆ. ಮೊಟ್ಟೆ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಮೊಟ್ಟೆಯನ್ನು ಶಾಲಾ ಮಕ್ಕಳಿಗೂ ಕೊಡಬಹುದು ಎಂದು ಹೇಳಿದ್ದಾರೆ. ಮೊಟ್ಟೆಯಲ್ಲಿ `ಜೀನೋಟಾಕ್ಸಿಕ್’ ಕೂಡಿದೆ ಎಂಬ ವಿಡಿಯೋ ಇತ್ತೀಚೆಗೆ ಹರಿದಾಡಿತ್ತು. ಸದ್ಯ ಇದಕ್ಕೆ ಸ್ಪಷ್ಟನೆ ಸಿಕ್ಕಿದೆ.
