ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಜನರನ್ನು ಕೊಂದು ನಿಗೂಢವಾಗಿ ಹೂಳಲಾಗಿದೆ ಅನ್ನೋ ಆರೋಪ ಸಂಬಂದ ರಾಜ್ಯ ಸರ್ಕಾರ ಅತಿದೊಡ್ಡ ನಿರ್ಧಾರ ಕೈಗೊಂಡಿದೆ. ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಈಗಾಗಲೇ ಎಸ್‌ಐಟಿ ರಚಿಸಲಾಗಿದೆ.. ಸಿಎಂ ಸಿದ್ದರಾಮಯ್ಯ, ನಾಲ್ವರು ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದ್ದಾರೆ.
ದಕ್ಷ ಅಧಿಕಾರಿ ಅಂತಲೇ ಖ್ಯಾತಿ ಗಳಿಸಿರುವ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಎಸ್‌ಐಟಿ ಲೀಡ್ ಮಾಡಲಿದ್ದು, ಐಪಿಎಸ್ ಅಧಿಕಾರಿಗಳಾದ ಎಂ.ಎನ್ ಅನುಚೇತ್ ಮತ್ತು ಸೌಮ್ಯಲತಾ ಹಾಗೂ ಜಿತೇಂದ್ರ ಕುಮಾರ್ ತಂಡದಲ್ಲಿದ್ದಾರೆ. ಈ ತಂಡ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ. ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಅಂತಾ ಸರ್ಕಾರಿ ಆದೇಶದಲ್ಲಿದೆ.
ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರಿ ಒತ್ತಡ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ರಚಿಸಲಾಗಿದ್ದು, ಸದ್ಯದಲ್ಲೇ ಧರ್ಮಸ್ಥಳಕ್ಕೆ ತೆರಳಿ ಹೂತು ಹಾಕಲಾಗಿದೆ ಎನ್ನಲಾದ ಅಸ್ಥಿಪಂಜರಗಳನ್ನು ಹೊರತೆಗೆಯಲಿದೆ. ಈಗಾಗ್ಲೇ ಪ್ರಮುಖ ಸಾಕ್ಷಿದಾರರೊಬ್ಬರು, ನಾನೇ ನೂರಾರು ಶವಗಳನ್ನು ಹೂತುಹಾಕಿದ್ದೇನೆ ಅಂತಾ ಕೋರ್ಟ್ ಮುಂದೆ ಸಾಕ್ಷ್ಯ ಹೇಳಿದ್ದು, ಭಾರಿ ಸಂಚಲನ ಸೃಷ್ಟಿಸಿದೆ..

