Site icon BosstvKannada

ತಾಪಂ, ಜಿಪಂ ಚುನಾವಣೆ ಯಾವಾಗ ನಡೆಯಲಿದೆ?

ಬೆಂಗಳೂರು: ತಾಪಂ, ಜಿಪಂ ಚುನಾವಣೆಗಾಗಿ ಕಾಯುತ್ತಿದ್ದ ಜನರಿಗೆ ಈಗ ಖುಷಿಯ ಸುದ್ದಿಯೊಂದು ಹೊರ ಬಿದ್ದಿದೆ. ಎರಡ್ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸಚಿವ ಪ್ರಿಯಾಂಕ್ ಖರ್ಗೆಗೆ ಸೂಚನೆ ನೀಡಿರುವುದಾಗಿ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಪಂ, ಜಿಪಂ ಚುನಾವಣೆಗಳನ್ನು ಎರಡ್ಮೂರು ತಿಂಗಳಲ್ಲಿ ನಡೆಸಬೇಕಿದೆ.‌‌ ಹೀಗಾಗಿ ಈಗಿನಿಂದಲೇ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದ್ದೇನೆ. ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಬೂತ್ ಮಟ್ಟದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು. ಸಿದ್ದರಾಮಯ್ಯ, ಶಿವಕುಮಾರ್ ಹಿಂದೆ ತಿರುಗಿದರೆ ಅವಕಾಶವಿಲ್ಲ‌. ಕೆಲಸ ಮಾಡಿದವರಿಗೆ ಮಾತ್ರ ಅವಕಾಶ ಎಂದು ಖಡಕ್ ಹೇಳಿಕೆ ನೀಡಿದ್ದಾರೆ.

ಗ್ಯಾರಂಟಿ ಸಮಿತಿ ಸದಸ್ಯರು, ಬೆಸ್ಕಾಂ, ಆರೋಗ್ಯ ಸಮಿತಿ ಸೇರಿದಂತೆ ಇತರೇ ಇಲಾಖೆಗಳಿಂದ ನಾಮನಿರ್ದೇಶನ ಮಾಡಿರುವ ಸದಸ್ಯರ ಸಂಖ್ಯೆಯೇ 150- 200 ಇದೆ. ಅವರು ಜವಾಬ್ದಾರಿ ವಹಿಸಬೇಕು. ರಾಜ್ಯದಲ್ಲಿ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಾಣ ಮಾಡಬೇಕು ಎಂದು ಹೊರಟಿದ್ದೇವೆ. ಈಗಾಗಲೇ 70 ಕಾಂಗ್ರೆಸ್ ಕಚೇರಿಗಳು ನಿರ್ಮಾಣವಾಗಿವೆ. ಎಲ್ಲ ತಯಾರಿಗಳನ್ನು ಈಗಲೇ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದೇನೆ ಎಂದಿದ್ದಾರೆ.

Exit mobile version