ಶಿವಮೊಗ್ಗ: ಶಾಸಕ ಜನಾರ್ದನ ರೆಡಡ್ ಮನೆ ಮುಂದೆ ನಿನ್ನೆ ರಾತ್ರಿಯಿಂದ ಹೈಡ್ರಾಮಾ ನಡೆಯುತ್ತಿದ್ದು, ಗಡಿ ನಾಡಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಾಲ್ಮೀಕಿ ಪುತ್ತಳಿ ಅನಾವರಣ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯವರ ಮಧ್ಯೆ ದೊಡ್ಡ ಫೈಟ್ ನಡೆದಿದೆ. ಬ್ಯಾನರ್ ಗಲಾಟೆ ಸಂಬಂಧ ಬ್ರೂಸ್‌ಫೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್, ಮಾರುತಿ ಪ್ರಸಾದ್ ಸೇರಿದಂತೆ ಹಲವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಜ. 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲು ಗುಂಪು ಮುಂದಾಗಿತ್ತು. ಆ ವೇಳೆ ಗಲಾಟೆ ನಿರ್ಧಾರವಾಗಿತ್ತು. ಆ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದರು. ಗಲಾಟೆ ನಡೆದ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಬಂದಿದ್ದರು. ಈ ಸಂದರ್ಭದಲ್ಲಿ ಎರಡು ಕಡೆ ಮಾತಿನ ಚಕಮಕಿ ನಡೆದು ಪೊಲೀಸರು ಲಾಠಿ ಚಾರ್ಜ್ ಮಾಡಿ, ಜನರನ್ನು ಚದುರಿಸಿದ್ದಾರೆ. ಪೊಲೀಸರು ಲಾಠಿ ಚಾರ್ಜ್ ಮಾಡಿದರೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಸಗಿ ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ಗುಂಡಿಗೆ ಕಾರಣ ಯಾರು ಎಂಬುವುದು ಇದುವರೆಗೆ ಗೊತ್ತಾಗಿಲ್ಲ. ಶಾಸಕ ಭರತ್ ರೆಡ್ಡಿ ಬೆಂಬಲಿಗ ಸತೀಶ ರೆಡ್ಡಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರೆಡ್ಡಿ ಮನೆಯ ಬಳಿ 200 ಮೀಟರ್‌ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

Share.
Leave A Reply