Site icon BosstvKannada

ಗಣಪತಿ ಹಬ್ಬ ಮಾಡೋಕೆ, ನೂರಾರು ಕಂಡಿಷನ್ಸ್‌ ಯಾಕೆ? ಹಿಂದೂಗಳೇ ಟಾರ್ಗೆಟ್‌ : ಆರ್‌ ಅಶೋಕ್‌ ಕಿಡಿ

ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು. ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದ್ದೂರು ಕಲ್ಲೆಸೆತ ಮತ್ತು ಲಾಠಿಚಾರ್ಜ್ ಹೇಯಕೃತ್ಯ. ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್ ಅವರು ಅಲ್ಲ, ಸರ್ಕಾರದ ಕುಮ್ಮಕ್ಕಿಲ್ಲದೇ ಈ ಘಟನೆಗಳು ನಡೆಯುತ್ತಿರಲಿಲ್ಲ. ನಾವು ಪಾಕಿಸ್ತಾನದಲ್ಲಿವೋ ಕರ್ನಾಟಕದಲ್ಲಿದ್ದೀವೋ ಎಂಬ ಭ್ರಮೆ ಮೂಡುತ್ತಿದೆ. ತಿಮರೋಡಿ ಗ್ಯಾಂಗ್ ಸಿದ್ದರಾಮಯ್ಯನ ಸುತ್ತ ಸುತ್ತಿಕೊಂಡಿದ್ದಾರೆ.

ಸಿದ್ದರಾಮಯ್ಯ ಕ್ಷಮೆ ಕೇಳಬೇಕು!
ಗಣಪತಿ ವಿಸರ್ಜನೆ ಮಾಡುವುದು ಸಾರ್ವಜನಿಕ ರಸ್ತೆ. ಇವರ ಅಪ್ಪನ ಆಸ್ತಿನಾ? ನಾವು ಟ್ಯಾಕ್ಸ್ ಕೊಟ್ಟಿರುವುದು. ಇವರ ಯೋಗ್ಯತೆಗೆ ಅಲ್ಲಿ ಒಂದು ಮೀಸಲು ಪಡೆ ಇಟ್ಟಿದ್ದರೆ ಲಾಠಿ ಚಾರ್ಜ್ ಅವಶ್ಯಕತೆ ಇತ್ತಾ? ಹಿಂದೂಗಳ ಮೇಲೆ ಲಾಠಿ ಚಾರ್ಜ್, ದುಷ್ಕರ್ಮಿಗಳಿಗೆ ಯಾಕೆ ಬಡಿದಿಲ್ಲ? ಕಲ್ಲು ಎಸೆದವರಿಗೆ ಯಾಕೆ ಬಡಿದಿಲ್ಲ? ಈ ತರಹ ಗೂಂಡಾಗಳು ಮಸೀದಿಯಲ್ಲಿ ಇರುತ್ತಾರೆ ಅಂತಾ ನಿಮಗೆ ಜ್ಞಾನ ಬೇಡವೇ. ಮದ್ದೂರು ಘಟನೆಗೆ ಸಿಎಂ, ಡಿಸಿಎಂ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

Read Also : ಮದ್ದೂರಿನಲ್ಲಿ ಗಲಾಟೆ ಮಾಡಿದವರ ಬಂಧನವಾಗಿದೆ : ಗೃಹ ಸಚಿವ ಡಾ.ಜಿ ಪರಮೇಶ್ವರ್

Exit mobile version