Site icon BosstvKannada

ಕುಮಾರಸ್ವಾಮಿ ಬಹಿರಂಗವಾಗಿ ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ್ದೇಕೆ?

ಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (H.D Kumaraswamy) ಬಹಿರಂಗವಾಗಿ ಆದಿಚುಂಚನಗಿರಿ ಶ್ರೀಗಳ(Nirmala Nandanath swamiji)ಕ್ಷಮೆ ಕೋರಿದ್ದಾರೆ. ಇಂದು ನಡೆದ ವಿಸಿ ಫಾರ್ಮ್ ನ ಕೃಷಿ ಮೇಳದಲ್ಲಿ ಕ್ಷಮೆ ಯಾಚಿಸಿದ್ದಾರೆ.

ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸುವುದಕ್ಕಾಗಿ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎಂಬ ಕನಸು ಇತ್ತು. ನನ್ನನ್ನು ಕಂಡರೆ ಅವರಿಗೆ ದೊಡ್ಡ ಪ್ರೀತಿ. ನನ್ನಿಂದ ಈಗ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

ಹಿಂದೆ ಕುಮಾರಸ್ವಾಮಿ, ನಾನು ಎರಡು ಬಾರಿ ಸಿಎಂ ಆಗಿ ಅಧಿಕಾರ ಕಳೆದುಕೊಂಡಾಗ ಯಾವುದೇ ಮಠಾಧೀಶರರ ನೆರವು ಕೇಳಿರಲಿಲ್ಲ. ಮಠಾಧೀಶರ ಕೆಲಸವೇ ಬೇರೆ ಎಂದು ಹೇಳಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ ಜಾತೀಯ ರಾಜಕಾರಣದಿಂದ ರಾಜ್ಯಕ್ಕೆ ನಷ್ಟವಾಗುತ್ತದೆಯೇ ಹೊರತು ಯಾರಿಗೂ ಲಾಭವಾಗುವುದಿಲ್ಲ. ಇದು ಸಮಾಜಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂಬ ಹೇಳಿಕೆ ನೀಡಿದ್ದರು. ಈಗ ಇದೇ ವಿಷಯವಾಗಿ ಕ್ಷಮೆ ಯಾಚಿಸಿದ್ದಾರೆ.

ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಅವರನ್ನು ಬಳಕೆ ಮಾಡಿಕೊಳ್ಳಬಾರದು ಎಂದು ನಾನು ಹೇಳಿಕೆ ನೀಡಿದ್ದೆ. ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಬಹುತೇಕರಿಗೆ ಗೊತ್ತಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಕುರ್ಚಿ ಗದ್ದಲ ಉಂಟಾದಾಗ ಶ್ರೀಗಳು ಡಿಕೆ ಪರ ಮಾತನಾಡಿದ್ದರು. ಈ ಸಂದರ್ಭದಲ್ಲಿಯೇ ಇಂತಹ ಹೇಳಿಕೆಗಳು ಕೇಳಿ ಬಂದಿದ್ದವು. ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ವಿರೋಧಿಸಿದ್ದರು.

Exit mobile version