Site icon BosstvKannada

ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯ ಉಳಿಸಿ ಎಂದಿದ್ದೇಕೆ ಆರ್‌ ಅಶೋಕ್‌

ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅನುದಾನಕ್ಕಾಗಿ ಸಚಿವ ಚಲುವರಾಯಸ್ವಾಮಿ ಸಿಎಂಗೆ ಮನವಿ ವಿಚಾರದ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು ಮುಖ್ಯಮಂತ್ರಿಗಳ ಬಳಿ ಅಂಗಲಾಚಬೇಕು ಅಂದರೆ ಕರ್ನಾಟಕ ಸರ್ಕಾರ ಎಷ್ಟು ದಿವಾಳಿ ಆಗಿದೆ ಅನ್ನುವುದನ್ನ ನೀವೇ ಊಹಿಸಿಕೊಳ್ಳಿ ಎಂದು ವ್ಯಂಗ್ಯವಾಡಿದ್ದಾರೆ.

ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅನುದಾನಕ್ಕಾಗಿ ಸಿಎಂ ಕಾಲಿಗೆ ಬೀಳಬೇಕು ಎನ್ನುತ್ತಾರೆ. ಸಿಎಂ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ನಿಮಗೆ ರಸ್ತೆ ಬೇಕಾದ್ರೆ ಗ್ಯಾರೆಂಟಿ ಯೋಜನೆ ನಿಲ್ಲಿಸುತ್ತೇವೆ ಎನ್ನುತ್ತಾರೆ. ಶಾಸಕ ಗವಿಯಪ್ಪನವರಂತೂ ಸ್ವಲ್ಪ ಮುಂದೆ ಹೋಗಿ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ವಿಧಾನಸೌಧದ ಮುಂದೆ ಸೂಸೈಡ್‌ ಮಾಡಿಕೊಳ್ಳಬೇಕಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಇನ್ನು ಶಾಸಕರಾದ ಬಿ.ಆರ್. ಪಾಟೀಲರು, ರಾಜು ಕಾಗೆ ಅವರು ಸೇರಿದಂತೆ ಅನೇಕ ಶಾಸಕರು ಅನುದಾನವಿಲ್ಲದೆ ತಮ್ಮ ಕ್ಷೇತ್ರಗಳಲ್ಲಿ ತಲೆ ಎತ್ತಿಕೊಂಡು ಓಡಾಡಲೂ ಆಗುತ್ತಿಲ್ಲ ಅಂತಾರೆ. ಈ ಬಗ್ಗೆ ಸೂಪರ್ ಸಿಎಂ ಸುರ್ಜೆವಾಲಾ ಅವರಿಗೆ ದೂರು ಕೊಟ್ಟಿರುವುದನ್ನ ಮಾಧ್ಯಮಗಳು ಬಿತ್ತರಿಸಿವೆ. ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಎಕ್ಸ್‌ ಅಕೌಂಟ್‌ನಲ್ಲಿ ಬರೆದುಕೊಂಡು ಟೀಕೆ ಮಾಡಿದ್ದಾರೆ.

Read Also : ‘ಜಿಬಿಎ’ದ ಮುಖ್ಯ ಆಯುಕ್ತರಾಗಿ ಎಂ. ಮಹೇಶ್ವರ ರಾವ್ ಅಧಿಕಾರ ಸ್ವೀಕಾರ

Exit mobile version