Site icon BosstvKannada

ವಿಜಯಲಕ್ಷ್ಮೀ ದೂರು ನೀಡಿದ್ದೇಕೆ? ಹೇಳಿದ್ದೇನು?

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ (Social Media) ಕೆಟ್ಟ ಕಮೆಂಟ್‌ ಪೋಸ್ಟ್‌ ಮಾಡಿದ ಖಾತೆಗಳ ವಿರುದ್ದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಸೈಬರ್‌ ಕ್ರೈಂ (Cyber Crime) ಪೊಲೀಸ್‌ ಠಾಣೆ ಪ್ರಕರಣ ದಾಖಲಿಸಿದ್ದಾರೆ. ದೂರು ನೀಡಿದ ನಂತರ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಇತ್ತೀಚೆಗೆಷ್ಟೇ ನಟ ಸುದೀಪ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಅವರು, ದರ್ಶನ್ ಇದ್ದಾಗ ಯಾರೂ ಮಾತನಾಡಲ್ಲ. ಅವರಿದ್ದಾಗ ಬೆಂಗಳೂರಿನಲ್ಲೇ ಇವರು ಇದ್ದಾರೋ ಇಲ್ಲೋ ಗೊತ್ತಾಗಲ್ಲ ಎಂದಿದ್ದರು. ಈಗ ಅದಕ್ಕೆ ಕೆಟ್ಟ ಕಮೆಂಟ್ ಗಳು ಬರುತ್ತಿವೆ ಎನ್ನಲಾಗುತ್ತಿದೆ. ಹೀಗಾಗಿ ಸಿಡಿದೆದ್ದ ವಿಜಯಲಕ್ಷ್ಮಿ 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್‌ ವಿರುದ್ಧ ಫೋಟೋ ಸಮೇತ ದೂರು ಸಲ್ಲಿಸಿದ್ದಾರೆ.

ಕೆಟ್ಟ ಕಾಮೆಂಟ್ಸ್ ಮಾಡಿದವರ ವಿರುದ್ಧ ವಿಜಯಲಕ್ಷ್ಮಿ (Vijayalakshmi Darshan) ಸಮರ ಸಾರಿದ್ದು, ಸೈಬರ್ ಕ್ರೈಂಗೆ (Cyber Crime) ದೂರಿನ ಬಳಿಕ ಸ್ಪಷ್ಟನೆ ನೀಡಿದ್ದಾರೆ. ಕ್ಲಾಸ್ ಫ್ಯಾನ್ಸ್ ಎಂದು ಕರೆಯಲ್ಪಡುವ ಎಲ್ಲರಿಗೂ ನಿಮ್ಮ ಮಟ್ಟವನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದಕ್ಕಾಗಿ ಧನ್ಯವಾದಗಳು. ಈ ಖಾತೆಗಳ ವಿರುದ್ಧ ಪೊಲೀಸ್ ದೂರುಗಳನ್ನು ದಾಖಲಿಸಲಾಗಿದೆ. ಅಭಿಮಾನದ ಹೆಸರಲ್ಲಿ ಇನ್ನು ಮುಂದೆ ಕಿರುಕುಳ ನಡೆಯುವುದಿಲ್ಲ ಎಂದಿದ್ದಾರೆ.

ಕೀಳು ಭಾಷೆ ಬಳಸುವ ಕ್ಲಾಸಿ ಹುಡುಗಿಯರಿಗೆ ಮತ್ತು ತಾಯಂದಿರು, ಸಭ್ಯತೆ ಮತ್ತು ಮೂಲಭೂತ ಶಿಷ್ಟಾಚಾರಗಳನ್ನು ಬೈಪಾಸ್ ಮಾಡಿ ನೇರವಾಗಿ ಆಕಾಶದಿಂದ ಬಿದ್ದಂತೆ ಕಾಣುವ ಕ್ಲಾಸಿ ಪುರುಷರಿಗೆ ವಿಶೇಷ ಅಭಿನಂದನೆಗಳು. ಇದರ ಬಗ್ಗೆ ಯಾವುದೇ ವಿವರಣೆ ಅಗತ್ಯವಿಲ್ಲ . ನಾನು ಮೌನವಾಗಿದ್ದುಕೊಂಡು ಇದನ್ನು ಅನುಮತಿಸುವುದಿಲ್ಲ. ಇದು ನಿಮ್ಮ ನಿತ್ಯದ ಕಾಯಕ ಆಗಿರಬಹುದು, ಇಂದು ಮತ್ತು ಮುಂದಿನ ದಿನಗಳಲ್ಲಿ ದೇವರು ನಿಮ್ಮನ್ನು ಆಶೀರ್ವದಿಸಲಿ. ಇದು ಕೇವಲ ನನ್ನ ಬಗ್ಗೆ ಅಲ್ಲ. ಪ್ರತಿಯೊಬ್ಬ ಮಹಿಳೆಯೂ ಗೌರವಕ್ಕೆ ಅರ್ಹಳು ಎಂದು ಇದು ನಿಮಗೆ ನೆನಪಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

Exit mobile version