BosstvKannada

ರಾಜ್ಯದಲ್ಲಿ Corona ರಣಕೇಕೆ.. ಶಾಲೆಗಳಿಗೆ ಸಿಗುತ್ತಾ ರಜೆ?

ಕರ್ನಾಟಕದಲ್ಲಿ Corona ಪ್ರಕರಣಗಳು ಹೆಚ್ಚುತ್ತಿದ್ದು, ಮೇ 29 ರಿಂದ ಶಾಲಾ-ಕಾಲೇಜುಗಳು ಮರು ಆರಂಭವಾಗುತ್ತಿವೆ. ಕೊರೊನಾ ಭೀತಿ ನಡುವೆ ಶಾಲಾ ಮಕ್ಕಳು ಶಾಲೆಗೆ ಹೋಗಬೇಕಾ? ಸೋಂಕಿನಿಂದ ಮಕ್ಕಳು ಯಾವ ರೀತಿ ಪಾರಾಗಬೇಕು? ಇದರ ಬಗ್ಗೆ ಸರ್ಕಾರ ಮತ್ತು ಕ್ಯಾಮ್ಸ್ ಸಂಘಟನೆಗಳ ಗೈಡ್‌ಲೈನ್ಸ್‌ ಏನು ಅನ್ನೋ ಬಗ್ಗೆ ಇಲ್ಲಿದೆ ಒಂದು ಕಂಪ್ಲೀಟ್‌ ರಿಪೋರ್ಟ್‌.

ರಾಜ್ಯದಲ್ಲಿ Corona ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ ಸೋಂಕಿತ ವೃದ್ಧರೊಬ್ಬರು ಶನಿವಾರ ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

ಮುಂದಿನ ವಾರ ಮೇ.29ರಿಂದ ರಾಜ್ಯದಲ್ಲಿ ಶಾಲೆಗಳು ಪುನಾರಂಭವಾಗುತ್ತವೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಅಂತ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳಿಗೆ ಮಾಸ್ಕ್ ಧರಿಸಿ ಶಾಲೆಗೆ ಕಳುಹಿಸುವಂತೆ ಪೋಷಕರಿಗೆ ಶಾಲೆಗಳ ಆಡಳಿತ ಮಂಡಳಿ ಸೂಚನೆ ನೀಡುತ್ತಿವೆ. ಶಾಲಾ-ಕಾಲೇಜು ಸಿಬ್ಬಂದಿಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ, ಆದ್ರೆ ಮುಂಜಾಗೃತ ಕ್ರಮವಾಗಿ ಎಚ್ಚರಿಕೆಯಿಂದ ಇರಬೇಕು ಎಂದು ಕ್ಯಾಮ್ಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅವರು ಮಾಹಿತಿ ನೀಡಿದ್ದಾರೆ..

ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವರಿಗೆ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವರ ಜೊತೆ ಮಾತುಕತೆ ನಡೆಸಿರುವ ಸಿಎಂ ಸಿದ್ದರಾಮಯ್ಯ, ಯಾವುದೇ ಕ್ರಮ ತೆಗೆದುಕೊಳ್ಳುವುದಕ್ಕೂ ಹಿಂದೇಟು ಹಾಕಬೇಡಿ. ಏನೇ ಕ್ರಮ ತೆಗೆದುಕೊಳ್ಳಬೇಕೆಂದರೂ ತಜ್ಞರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

Also Read: Team India ಪೀಸ್‌ ಪೀಸ್‌.. ಎಲ್ಲಾ ಫಾರ್ಮ್ಯಾಟ್‌ಗೂ ಭಿನ್ನ ಕ್ಯಾಪ್ಟನ್ಸ್‌..!

ಆರೋಗ್ಯ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಕೊರೊನಾ ಬಗ್ಗೆ ಜನರು ಆತಂಕಪಡುವ ಅವಶ್ಯಕತೆ ಇಲ್ಲ. ಕೊರೊನಾ ಲಕ್ಷಣ ಇದ್ದವರು ಟೆಸ್ಟಿಂಗ್ ಮಾಡಿಸಿಕೊಳ್ಳಿ. ಜನನಿಬಿಡ ಪ್ರದೇಶದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಚಿಕ್ಕಮಕ್ಕಳು, ಗರ್ಭಿಣಿಯರಿಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

ಈವರೆಗೂ ಆರ್‌ಟಿಪಿಸಿಆರ್ ಟೆಸ್ಟ್ ಶುರುವಾಗದಿದ್ದರೂ, ಗರ್ಭಿಣಿಯರು ಮತ್ತು ಬಾಣಂತಿಯರ ಮೇಲೆ ನಿಗಾ ಇಡಲಾಗಿದೆ. ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಟೆಸ್ಟ್ ಮಾಡಲಾಗುತ್ತಿದೆ. ಮಾಸ್ಕ್​ ಧರಿಸಬೇಕು ಹಾಗೂ ಜನಸಂದಣಿ ಸ್ಥಳಗಳಲ್ಲಿ ಓಡಾಡಬಾರದು. ಮಕ್ಕಳ ಮೇಲೂ ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

Exit mobile version