ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟು ಕಳುಹಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪಿಸಿದ್ದರು. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ಮಾಸ್ಕ್ ಮ್ಯಾನ್‌ಗೆ ಬುರುಡೆ ಕೊಟ್ಟಿದ್ದು ನಾನು ಎಂಬ ಶಾಸಕ ಜನಾರ್ಧನ ರೆಡ್ಡಿ ಹೇಳಿಕೆಯನ್ನು ಸಂಸದ ಸಸಿಕಾಂತ್ ಸೆಂಥಿಲ್ ತಳ್ಳಿ ಹಾಕಿದ್ದಾರೆ.
ಜನಾರ್ದನ ರೆಡ್ಡಿ ಹೇಳಿಕೆಗಳು ಆಧಾರ ರಹಿತ, ಅದರಲ್ಲಿ ಯಾವುದೇ ಸತ್ಯವಿಲ್ಲ. ಬಳ್ಳಾರಿಯಲ್ಲಿ ನಾನು ಸಹಾಯಕ ಆಯುಕ್ತನಾಗಿದ್ದಾಗ ಅವರ ಅಪರಾಧಗಳನ್ನ ಬಹಿರಂಗಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಕೆಲಸದ ಭಾಗವಾಗಿ ನಾನು ಇದನ್ನು ಮಾಡಿದ್ದೇನೆ. ಬಹುಶಃ ಆ ಕಾರಣಗಳಿಂದ ಅವರು ನನ್ನ ಮೇಲೆ ಇಂತಹ ಆರೋಪ ಮಾಡಿರಬಹುದು ಎಂದಿದ್ದಾರೆ.
ಇದನ್ನ ಹೊರತುಪಡಿಸಿ ಇದು ಬಿಜೆಪಿಯ ಹತಾಶ ರಾಜಕೀಯವಾಗಿರಬಹುದು ಎಂದು ತಿರುಗೇಟು ನೀಡಿದ್ದಾರೆ. ಇತ್ತಿಚೇಗೆ ಕರ್ನಾಟಕದಲ್ಲಿ ಹೊರ ಬಂದ ವೋಟ್ ಚೋರಿ ಪ್ರಕರಣದ ಗಮನವನ್ನ ಬೇರೆಡೆ ಸೆಳೆಯುವ ಪ್ರಯತ್ನಕ್ಕಾಗಿ ರೆಡ್ಡಿ ಆರೋಪ ಮಾಡಿರಬಹುದು. ವದಂತಿಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
Read Also : ಧರ್ಮಸ್ಥಳ ಪ್ರಕರಣ : ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಊಹಾಪೋಹ, ಕಟ್ಟು ಕತೆಗಳನ್ನು ಹೇಳ್ತಿದ್ದಾರೆ – ಸಸಿಕಾಂತ್ ಸೆಂಥಿಲ್

