Site icon BosstvKannada

ಮೂರನೇ ಪಂದ್ಯದಿಂದ ಗಿಲ್ ಗೆ ತಂಡದಿಂದ ಗೇಟ್ ಪಾಸ್?

ಮೊಹಾಲಿ: ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಆಡುತ್ತಿರುವ ಭಾರತೀಯ ಕ್ರಿಕೆಟ್ ತಂಡ ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದು ಬೀಗಿತ್ತು. ಆದರೆ, ಎರಡನೇ ಪಂದ್ಯವನ್ನು ಕೈ ಚೆಲ್ಲಿತ್ತು. ಹೀಗಾಗಿ ಮೂರನೇ ಪಂದ್ಯ ಹೆಚ್ಚು ಒತ್ತಡದಿಂದ ಕೂಡಿದ್ದು, ಸ್ಥಿರ ಪ್ರದರ್ಶನ ನೀಡಲು ವಿಫಲವಾಗುತ್ತಿರುವ ಏಕದಿನ ತಂಡದ ನಾಯಕ ಶುಭ್ಮನ್ ಗಿಲ್ ರನ್ನು ಕೈ ಬಿಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ(India vs South Africa) ನಡುವಿನ ಐದು ಪಂದ್ಯಗಳ ಸರಣಿಯ ಮೂರನೇ ಟಿ20ಐ(IND vs SA 3rd T20I) ಭಾನುವಾರ ನಡೆಯಲಿದೆ. ಈ ಪಂದ್ಯದಿಂದ ಶುಭಮನ್ ಗಿಲ್(Shubman Gill) ಅವರನ್ನು ಆಡುವ ತಂಡದಿಂದ ಕೈ ಬಿಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ತಂಡದ ಉಪನಾಯಕನಾಗಿರುವ ಗಿಲ್, ಮೊದಲ ಪಂದ್ಯದಲ್ಲಿ ಎರಡು ಎಸೆತಗಳಲ್ಲಿ ನಾಲ್ಕು ರನ್ ಗಳಿಸಿ ಔಟ್ ಆಗಿದ್ದರು. ಎರಡನೇ ಪಂದ್ಯದಲ್ಲಿ ಗೋಲ್ಡನ್ ಡಕ್ ಆಗಿದ್ದರು. ಹೀಗಾಗಿ ಗಿಲ್ ಬದಲಾಗಿ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೇ, ಗಿಲ್ ಜೊತೆ ಅರ್ಶ್‌ದೀಪ್ ಸಿಂಗ್ ಕೂಡ ಹೊರಗೆ ಉಳಿಯುವ ಸಾಧ್ಯತೆ ಇದೆ. ಆರ್ಷದೀಪ್ ಎರಡನೇ ಪಂದ್ಯದಲ್ಲಿ ನಾಲ್ಕು ಓವರ್‌ ಎಸೆದು ಬರೋಬ್ಬರಿ 54 ರನ್ ನೀಡಿ, ದುಬಾರಿ ಎನಿಸಿದ್ದರು. ಅಲ್ಲದೇ, 9 ವೈಡ್ ಬಾಲ್ ಎಸೆದು ಕೋಚ್ ಗೌತಮ್ ಗಂಭೀರ್ ಕೆಂಗಣ್ಣಿಗೆ ಗುರಿಯಾಗಿದ್ದರು. ಹೀಗಾಗಿ ಈ ಇಬ್ಬರು ಪ್ರಮುಖ ಆಟಗಾರರು ತಂಡದಿಂದ ಹೊರಗೆ ಉಳಿಯುವ ಸಾಧ್ಯತೆ ದಟ್ಟವಾಗಿದೆ.

ಒಂದು ವೇಳೆ ಸ್ಯಾಮ್ಸನ್ ತಂಡಕ್ಕೆ ಮರಳಿದರೆ, ಇಬ್ಬರು ವಿಕೆಟ್ ಕೀಪರ್ ತಂಡ ಸೇರಿದಂತಾಗುತ್ತದೆ. ಕುಲದೀಪ್ ಯಾದವ್ ಕೂಡ ಮರಳಿ ತಂಡ ಸೇರಬಹುದು.

Exit mobile version