Site icon BosstvKannada

ಚಳಿಗಾಲದ ಅಧಿವೇಶನ: ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ ಗುಪ್ತಚರ ಇಲಾಖೆ

ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ದಿನಗಣನೆ ಆರಂಭವಾಗಿದ್ದು, ಗುಪ್ತಚರ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.

ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿ. 8ರಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸೂಕ್ತ ಭದ್ರತೆ ಕೈಗೊಳ್ಳಬೇಕು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗುಪ್ತಚರ ಇಲಾಖೆ (Intelligence Department) ಸೂಚಿಸಿದೆ.
ಹೀಗಾಗಿ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಿದ್ದು, ಹೈ ಅಲರ್ಟ್ ಆಗಿದೆ. ಹೀಗಾಗಿ ಅಧಿವೇಶನದ ಸಮಯದಲ್ಲಿ 8 ಸಾವಿರದಷ್ಟು ಪೊಲೀಸರನ್ನು ನಿಯೋಜಿಸಲು ಇಲಾಖೆ ನಿರ್ಧರಿಸಿದೆ.

ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಅಧಿವೇಶನದ ಸಂದರ್ಭದಲ್ಲಿ ಸಾಕಷ್ಟು ಪ್ರತಿಭಟನೆಗಳು ಕೂಡ ನಡೆಯುತ್ತವೆ. ಹೀಗಾಗಿ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗುತ್ತಿದೆ. ಈಗಾಗಲೇ ಸುವರ್ಣ ಸೌಧದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡುತ್ತಿದೆ.

Exit mobile version