ದಾವಣಗೆರೆ: ರಾಟ್ ವೀಲರ್ (Rottweiler) ನಾಯಿಗೆ ಮಹಿಳೆಯೋರ್ವರು ಬಲಿಯಾಗಿರುವ ಹೃದಯ ವಿದ್ರಾವಕ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ದಾವಣಗೆರೆ (Davanagere) ಹೊರ ವಲಯದ ಹೊನ್ನೂರು ಗೊಲ್ಲರಹಟ್ಟಿಯಲ್ಲಿ ನಡೆದಿದೆ. ರಾಟ್ ವೀಲರ್ ನಾಯಿ ದಾಳಿಯಿಂದ (Rottweiler Attack) ಸಾವನ್ನಪ್ಪಿದ ಮಹಿಳೆಯನ್ನು ಅನಿತಾ (38) ಎನ್ನಲಾಗಿದೆ. ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕಾರಿನಲ್ಲಿ ಬಂದ ಅಪರಿಚಿತರು 2 ರಾಟ್ ವೀಲರ್ ಜಾತಿಯ ನಾಯಿಗಳನ್ನು ಹೊನ್ನೂರು ಗೊಲ್ಲರಹಟ್ಟಿಯ ಬಳಿ ಬಿಟ್ಟು ಹೋಗಿದ್ದು, ಆ ವೇಳೆ ಮನೆಯಿಂದ ಹೊರ ಬಂದ ಮಹಿಳೆ ಮೇಲೆ ಶ್ವಾನಗಳು ದಾಳಿ ನಡೆಸಿವೆ ಎನ್ನಲಾಗಿದೆ. ನಾಯಿ ದಾಳಿಯಿಂದಾಗಿ ಮಹಿಳೆ ಗಂಭೀರವಾಗಿ ಅಸ್ವಸ್ಥರಾಗಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತಾದರೂ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮಹಿಳೆಯ ದೇಹದ ಸುಮಾರು 50 ಭಾಗಗಳಲ್ಲಿ ನಾಯಿ ಕಚ್ಚಿದೆ ಎಂದು ತಿಳಿದು ಬಂದಿದೆ. ಸದ್ಯ ನಾಯಿ ಬಿಟ್ಟವರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Share.
Leave A Reply