ಬೆಂಗಳೂರು: ಡೆಲಿವರಿ ಬಾಯ್ ಒಬ್ಬಾತ ಮಾಲ್‌ನಲ್ಲಿ ಕ್ರಿಸ್ಮಸ್ ಆಚರಿಸುತ್ತಿದ್ದ ಸಂದರ್ಭದಲ್ಲಿ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಗುವಾಹಟಿ ಮೂಲದ ಮನೂಜ್ ಚಾಂದ್(27) ಬಂಧಿತ ಆರೋಪಿ. ಈತ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಡಿ. 25ರಂದು ರಾತ್ರಿ 9:30ರ ವೇಳೆಗೆ ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಯುವತಿ ಬಳಿ ಮುಂದೆ ಹೋಗಿ ಖಾಸಗಿ ಅಂಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ. ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಬಂಧಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
